ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಇಂದು ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಸಚಿವ ಸಂಪುಟಕ್ಕೆ ಮಹಿಳಾ ಸದಸ್ಯರನ್ನು ಸೇರಿಸಿಕೊಳ್ಳುವ ಪ್ರಸ್ತಾವನೆಯನ್ನು ಹೈಕಮಾಂಡ್ ಮುಂದೆ ಇಡಲಾಗುತ್ತಿದೆ.
ಇಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಬಿಡುಗಡೆ ಸಮಾರಂಭ ನಡೆಯಲಿದೆ. ಇದರಲ್ಲಿ ಭಾಗಿಯಾಗಲು ಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದು ರಾತ್ರಿ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
ಇಂದು ಮಹಿಳಾ ಸದಸ್ಯರ ಸೇರ್ಪಡೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ಮಾಡಲು ಸಮಯಾವಕಾಶ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ. ಆದರೆ ಪ್ರಸ್ತಾವನೆ ಇರಿಸಿದ್ದೇನೆ. ಆದಷ್ಟು ಭೇಟಿ ಮಾಡಲು ಟ್ರೈ ಮಾಡುತ್ತೇನೆ. ಸಮಯ ನೋಡಿಕೊಂಡು ಚರ್ಚೆ ಮಾಡುತ್ತೇನೆ ಎಂದಿದ್ದಾರೆ. ರಾಜ್ಯ ವಿಧಾನಮಂಡಲದ ಮುಂದಿನ ಅಧಿವೇಶನಕ್ಕೂ ಮೊದಲು, ರಾಜ್ಯ ಸಚಿವ ಸಂಪುಟಕ್ಕೆ ಒಬ್ಬ ಮಹಿಳಾ ಸಚಿವೆಯನ್ನು ಸೇರಿಸಿಕೊಳ್ಳಲಾಗುವುದು ಎಂದು ಕಳೆದ ವಾರ ಶಿವಕುಮಾರ್ ಹೇಳಿದ್ದರು.



