November 17, 2026
Tuesday, November 17, 2026
spot_img

ಮಾಜಾಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನಲ್ಲಿ ಅರೆಸ್ಟ್

ಹೊಸದಿಗಂತ ವರದಿ ಕಾರವಾರ:

ಕಾರವಾರದ ಮಾಜಾಳಿಯ ಸೆಲೂನ್ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರವಾರ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಕಾರವಾರದ ಮಾಜಾಳಿಯ ಸೆಲೂನ್‌ನಲ್ಲಿ ಕ್ಷೌರಿಕನಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಸಂಶಾದ್ ಬಂಧಿತ ಆರೋಪಿಯಾಗಿದ್ದಾನೆ. ಸೆಲೂನ್‌ಗೆ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದಡಿ ದೂರು ದಾಖಲಾಗಿತ್ತು.

ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಸಂಶಾದ್ ತಲೆಮರೆಸಿಕೊಂಡಿದ್ದ. ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಚಿತ್ತಾಕುಲ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್.ಎಂ ಅವರ ಮಾರ್ಗದರ್ಶನದಲ್ಲಿ ಆರೋಪಿಯ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.

ತಾಂತ್ರಿಕ ಮಾಹಿತಿಯ ಆಧಾರದಲ್ಲಿ ತನಿಖೆ ಮುಂದುವರಿಸಿದ ಪೊಲೀಸರು ಮುಂಬೈಗೆ ತೆರಳಿದ್ದರು. ಅಲ್ಲಿನ ಶಿವಾಜಿನಗರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಂಶಾದ್‌ನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆರೋಪಿಯನ್ನು ಕಾರವಾರಕ್ಕೆ ಕರೆತಂದಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Must Read

Skip to toolbar