November 17, 2026
Tuesday, November 17, 2026
spot_img

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂ ಡಿಕೆಶಿಗೆ ಪ್ರಹ್ಲಾದ್ ಜೋಶಿ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಕಬ್ಬು ಖರೀದಿ, ಕಟಾವು, ಸಾಗಣೆ ಹಾಗೂ ರೈತರಿಗೆ ಸಕಾಲದಲ್ಲಿ ಹಣ ಪಾವತಿಸುವಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ಆಡಳಿತಾತ್ಮಕ ಕ್ರಮ ಕೈಗೊಳ್ಳಿ

ಕೇಂದ್ರ ಸರ್ಕಾರವು ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ, ಎಥೆನಾಲ್ ನೀತಿ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ. ರೈತರ ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸುವ ಪ್ರಯತ್ನವನ್ನೂ ಮಾಡಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ತ್ವರಿತ ಆಡಳಿತಾತ್ಮಕ ಮತ್ತು ಆರ್ಥಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ ಜೋಶಿ

2025-26ನೇ ಸಕ್ಕರೆ ಹಂಗಾಮಿನಲ್ಲಿ ಪಾವತಿಸಬೇಕಿದ್ದ 1,14,958 ಕೋಟಿ ರೂ. ಕಬ್ಬಿನ ಬಾಕಿ ಮೊತ್ತದಲ್ಲಿ 1,13,325 ಕೋಟಿ ರೂ. ಪಾವತಿಯಾಗಿದ್ದು, ಶೇ.99.6ರಷ್ಟು ಬಾಕಿ ವಿಲೇವಾರಿಯಾಗಿದೆ ಎಂದು ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಮಹಾರಾಷ್ಟ್ರದ ಮಾದರಿಯಲ್ಲಿ ಸಕ್ಕರೆ ಕಾರ್ಖಾನೆಗಳ ಸಹ-ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ವಿದ್ಯುತ್ ಖರೀದಿ ಮತ್ತು ಮಾರಾಟ ಒಪ್ಪಂದಗಳ ಬಗ್ಗೆಯೂ ರಾಜ್ಯ ಸರ್ಕಾರ ಪರಿಶೀಲಿಸಬೇಕು ಎಂದು ಸಲಹೆ ನೀಡಿದ್ದಾರೆ.

Must Read

Skip to toolbar