November 18, 2026
Wednesday, November 18, 2026
spot_img

ಚಳಿಯ ರಾತ್ರಿಯೂ ಲೆಕ್ಕಕ್ಕಿಲ್ಲ, ಮಕ್ಕಳೊಂದಿಗೆ ಬೀದಿಗಿಳಿದ ‘ಆಶಾ’: 15 ಸಾವಿರ ರೂ. ವೇತನಕ್ಕಾಗಿ ಮುಂದುವರಿದ ಅಹೋರಾತ್ರಿ ಹೋರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕನಿಷ್ಠ ಮಾಸಿಕ ವೇತನವನ್ನು 15 ಸಾವಿರಕ್ಕೆ ಹೆಚ್ಚಿಸಬೇಕು, ಭರವಸೆಯ ಬದಲು ಅಧಿಕೃತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಚಳಿಯ ನಡುವೆಯೂ ಪ್ರತಿಭಟನಾ ಸ್ಥಳದಲ್ಲೇ ರಾತ್ರಿ ಕಳೆದಿದ್ದಾರೆ. ಕೆಲವರು ತಮ್ಮ ಪುಟ್ಟ ಮಕ್ಕಳನ್ನೂ ಕರೆತಂದು ಅಹೋರಾತ್ರಿ ಧರಣಿ ನಡೆಸುತ್ತಿರುವುದು ಮನಕಲಕುವಂತಿದೆ.

ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ

ನಿನ್ನೆ ರಾತ್ರಿ ಆರೋಗ್ಯ ಸಚಿವ ಯು.ಟಿ. ಖಾದರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲು ಆಲಿಸಿದರು. ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:

ಆದರೆ ಭರವಸೆಗೆ ಮಣಿಯದ ಆಶಾ ಕಾರ್ಯಕರ್ತೆಯರು ಸರ್ಕಾರ ಅಧಿಕೃತ ಆದೇಶ ಹೊರಡಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಆದೇಶಕ್ಕಾಗಿ ಕಾಯುತ್ತಿರುವ ಆಶಾಗಳು

ಜನರ ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುವ ಆಶಾ ಕಾರ್ಯಕರ್ತೆಯರು ಇದೀಗ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದಿದ್ದಾರೆ. ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿರುವ ಅವರ ಹೋರಾಟ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Must Read