Sunday, September 21, 2025

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೊಟೀಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೊಟೀಸ್ ಜಾರಿಗೊಳಿಸ

ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ ಎನ್‌ ಸುಬ್ಬಾರೆಡ್ಡಿ ಮತ್ತಿತರರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಈ ಅರ್ಜಿಗಳ ವಿಚಾರಣೆ ನಡೆಸಿದ ಅನು ಶಿವರಾಮನ್‌ ಮತ್ತು ನ್ಯಾಯಮೂರ್ತಿ ಕೆ ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರಗಳು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಕೇಂದ್ರ ಸರ್ಕಾರ ಜಾತಿ ಗಣತಿ ಪ್ರಾಧಿಕಾರ, ಗಣತಿ ರಿಜಿಸ್ಟ್ರಾರ್‌ ಸೇರಿದಂತೆ ಎಲ್ಲ ಸಂಬಂಧಿತ ಪ್ರತಿವಾದಿಗಳಿಗೆ ನೊಟೀಸ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯನ್ನು 22ಕ್ಕೆ ನಿಗದಿ ಪಡಿಸಿತು.

ಇದನ್ನೂ ಓದಿ