ಹೊಸದಿಗಂತ ವರದಿ ಮಂಡ್ಯ:
ಹಲಗೂರು ಸಮೀಪದ ಚೆನ್ನೀಪುರ ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಹುಲ್ಲಾಗಾಲ ಗ್ರಾಮದ ನಿವಾಸಿ ಈರಣ್ಣ (55) ಮೃತಪಟ್ಟಿದ್ದಾರೆ. ಈ ಘಟನೆ ಗುರುವಾರ ಸಂಜೆ ನಡೆದಿದೆ.
ಇವರು ಸ್ಕೂಟರ್ನಲ್ಲಿ ಹಲಗೂರು ಕಡೆಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಚೆನ್ನೀಪುರ ಗೇಟ್ ಬಳಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಈರಣ್ಣ ಅವರಿಗೆ ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



