November 21, 2026
Saturday, November 21, 2026
spot_img

ಹಾರಂಗಿ ಹಿನ್ನೀರಿನಲ್ಲಿ ಮುಳುಗಿದ ಯುವಕ: ಎರಡು ದಿನಗಳ ಶೋಧದ ಬಳಿಕ ಮೃತದೇಹ ಪತ್ತೆ

ಹೊಸದಿಗಂತ ವರದಿ ಮಡಿಕೇರಿ:

ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿ ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಶನಿವಾರ ಮುಂಜಾನೆ ಪತ್ತೆಯಾಗಿದೆ.

ಮೃತನನ್ನು ಹಾರಂಗಿ ಹಿನ್ನೀರು ಪ್ರದೇಶವಾದ ಹೇರೂರು ಹಾಡಿಯ ನಿವಾಸಿ ವಿನೋದ್ (27) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಸ್ನಾನಕ್ಕೆಂದು ತೆರಳಿದ್ದ ವಿನೋದ್ ಕಣ್ಮರೆಯಾಗಿದ್ದ. ಈ ಹಿನ್ನೆಲೆಯಲ್ಲಿ  ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಎರಡು ದಿನಗಳಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.

ಆದರೆ ಶುಕ್ರವಾರ ಮುಂಜಾನೆ ಮೃತದೇಹ ನೀರಿನಲ್ಲಿ ತೇಲುತ್ತಿದ್ದುದನ್ನು ಗಮನಿಸಿ ಸ್ಥಳೀಯರ ಮೃತದೇಹವನ್ನು  ಹೊರತೆಗೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ  ನೀಡಿ ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ..

Must Read

Skip to toolbar