ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸವ ಮಂಟಕ ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಪೊಲೀಸರು ಲುಕ್ಔಟ್ ನೊಟೀಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ರವಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಲೇಖಕ ರವಿ ಹಂಜ್ ಅವರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾರ್ಕೆಟ್ ಠಾಣೆಯ ಪೊಲೀಸರು ಈ ಹಿಂದೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಕೊಚ್ಚಿ ವಿಮಾನ ನಿಲ್ದಾಣಕ್ಕೆ ರವಿ ಹಂಜ್ ಆಗಮಿಸುತ್ತಿದ್ದಂತೆಯೇ ಅವರನ್ನು ತಡೆಯಲಾಗಿದೆ.
ತದನಂತರ ಏರ್ಪೋರ್ಟ್ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಹಾಗೂ ತಕ್ಷಣವೇ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸದ್ಯ ಬೆಳಗಾವಿ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಹಾಗೂ ರವಿ ಹಂಜ್ ಅವರನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.



