Saturday, September 20, 2025

ರಾಜ್ಯ ಮುಜರಾಯಿ ಇಲಾಖೆ 9 ದೇವಾಲಯಗಳ ಸೇವಾಶುಲ್ಕ ಏರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ.

ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
ಬೆಂಗಳೂರು ನಗರ

  • ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
  • ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
  • ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

ಚಿಕ್ಕಬಳ್ಳಾಪುರ

  • ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
  • ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

ದಕ್ಷಿಣ ಕನ್ನಡ

  • ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
  • ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
  • ಸೌತಡ್ಕ ಮಹಾಗಣಪತಿ ದೇವಾಲಯ
  • ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ

ಇದನ್ನೂ ಓದಿ