ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಸುರಿ ಲೈಫ್ಸ್ಟೈಲ್ಗಾಗಿ ಉದ್ದೇಶದಿಂದ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ.
ಇಮ್ರಾನ್ ಪಾಷಾ ಹಾಗೂ ಆಯಿಷಾ ಸಿದ್ದಿಕಿ ಬಂಧಿತರು. ಇವರು ಬರೋಬ್ಬರು ಐದು ಕೋಟಿ, 72 ಲಕ್ಷ ರೂಪಾಯಿ ಮೌಲ್ಯದ ಐದು ಕೆಜಿ ಮೆಥಾಂಫೆಟಮೈನ್ ಮಾದಕವನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೆಂಚೇನಹಳ್ಳಿಯಿಂದ ಹಾರೋಹಳ್ಳಿ ಕಡೆ ತೆರಳುವ ರಸ್ತೆಯ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದುದರ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರು ನವೆಂಬರ್ 22ರಂದು ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಆರೋಪಿಗಳ ಬಳಿ 5 ಕೆ.ಜಿ. 720 ಗ್ರಾಂ ತೂಕದ ಎಂಡಿಎಂಎ ಮಾದಕವಸ್ತು ಪತ್ತೆಯಾಗಿದೆ.
ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಆರೋಪಿಗಳು ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಯಾರಿಗೆ ಮಾದಲ ಪದಾರ್ಥಗಳ ಮಾರಾಟ ಮಾಡುತ್ತಿದ್ದರು? ಈ ದಂಧೆಯ ಹಿಂದೆ ಮತ್ತಷ್ಟು ವ್ಯಕ್ತಿಗಳ ಕೈವಾಡವಿದೆಯೇ? ಎಂಬುದರ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



