November 25, 2026
Wednesday, November 25, 2026
spot_img

ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ತಿರುಗೇಟು; ಪ್ರಧಾನಿ ಮೋದಿ ನಾಯಕತ್ವಕ್ಕೆ ದೇಶದ ಜನರ ಬೆಂಬಲವಿದೆ ಎಂದ ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ಕಲಬುರಗಿ:

ಮಲ್ಲಿಕಾರ್ಜುನ್ ಖರ್ಗೆ ಅವರೇ,ಮೋದಿ ಕಾ ಬಾಪ್ ಭೀ ಜಾಯೇಗಾ’ಎಂದು ಹೇಳಿದ್ದೀರಿ. ಆದರೆ, ಮೋದಿ ಎಲ್ಲಿಯೂ ಹೋಗುವುದಿಲ್ಲ ಎಂದು ದೇಶದ ಜನರೇ ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದರು.

ನಗರದ ಜಗತ್ ವೃತ್ತದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ’ ಪಾದಯಾತ್ರೆಯ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗ, ಸುಪ್ರೀಂಕೋರ್ಟ್ ಹಾಗೂ ಇವಿಎಂ ಮೇಲೆಯೂ ಕಾಂಗ್ರೆಸ್ ನಾಯಕರಿಗೆ ವಿಶ್ವಾಸವಿಲ್ಲ. ಹಾಗಾದರೆ ಸಂವಿಧಾನಾತ್ಮಕ ಸಂಸ್ಥೆಗಳ ಯಾವ ಹುದ್ದೆಗಳಿಗೆ ಕಾಂಗ್ರೆಸ್ ಗೌರವ ನೀಡುತ್ತಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ. ರೈತರ ಪಾಲಿಗೆ ಕಾಂಗ್ರೆಸ್ ಇದ್ದೂ ಸತ್ತಂತಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮನೆಗೆ ಹೋಗುವುದು ಖಚಿತ ಎಂದರು.

ಇದೇ ವೇದಿಕೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಭರವಸೆ ನೀಡಲು ಬಯಸುತ್ತೇನೆ. 2028ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆದಾಗ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ-ಎನ್‌ಡಿಎ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Must Read

Skip to toolbar