ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಸರಳ ಮಂತ್ರ ಮಾಂಗಲ್ಯ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಮನಗರದ ಜನಪದ ಲೋಕದ ದೊಡ್ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಾ. ಶ್ರೀನಿಧಿ ಅವರ ಕೈ ಹಿಡಿದು ಹೊಸ ಜೀವನಕ್ಕೆ ನಾಂದಿ ಹಾಡಿದ್ದಾರೆ.
ಆಡಂಬರದ ಮದುವೆಗೆ ಬದಲಾಗಿ ಸರಳತೆಗೆ ಆದ್ಯತೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಮಂತ್ರ ಮಾಂಗಲ್ಯ ಪದ್ಧತಿಯಂತೆ ವಿವಾಹವಾಗಿದ್ದಾರೆ. ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನವದಂಪತಿಗೆ ಶುಭ ಹಾರೈಸಿದ್ದಾರೆ. ಚನ್ನಪಟ್ಟಣದ ಪಿಟಿಎಸ್ ಆವರಣದ ಹೆಲಿಪ್ಯಾಡ್ಗೆ ಬಂದಿಳಿದ ಅವರು ರಸ್ತೆ ಮಾರ್ಗವಾಗಿ ಜನಪದ ಲೋಕಕ್ಕೆ ಆಗಮಿಸಿದ್ದರು. ವಿವಾಹ ಸಮಾರಂಭದಲ್ಲಿ ಭಾಗಿಯಾದ ಬಳಿಕ ಹೆಲಿಕಾಪ್ಟರ್ ಮೂಲಕ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಸರಳ ವಿವಾಹದ ಮೂಲಕ ಮಾದರಿಯಾಗಿರುವ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಹೊಸ ಜೀವನಕ್ಕೆ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.



