November 26, 2026
Thursday, November 26, 2026
spot_img

ಮುಂದುವರಿದ ಗೋಲ್ಡ್‌ ರೇಟ್‌ ಕಣ್ಣಾಮುಚ್ಚಾಲೆ : ಇಂದು ಮತ್ತೆ ಬೆಲೆ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿನ್ನೆ ಭರ್ಜರಿ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಹೆಚ್ಚಳವಾಗಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಎಂಸಿಎಕ್ಸ್ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,15,400 ರೂ. ಆಗಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,25,890 ರೂ. ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 16,500 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಚಿನ್ನದ ಬೆಲೆಯಲ್ಲಿ ಏರಿಕೆ ದಾಖಲಾಗಿದೆ. 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,15,400 ರೂ. ಹಾಗೂ 100 ಗ್ರಾಂ ಬೆಳ್ಳಿಯ ಬೆಲೆ 16,500 ರೂ. ಇದೆ.

ಚಿನ್ನ ದರ ಇಳಿಕೆಯ ಕಾರಣದಿಂದ ಜನರು ಬಂಗಾರದ ಅಂಗಡಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ನವೆಂಬರ್‌ನಲ್ಲಿ ಮದುವೆ ಹಾಗೂ ಶುಭಕಾರ್ಯಗಳು ಹೆಚ್ಚಿರುವ ಕಾರಣ ಚಿನ್ನದ ವಹಿವಾಟು ಭರ್ಜರಿಯಾಗಿ ಸಾಗುತ್ತಿದೆ. ಇದರ ಮಧ್ಯ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. ಆದರೂ ಜನರು ಬಂಗಾರ ಖರೀದಿಯಲ್ಲಿ ನಿರತರಾಗಿದ್ದಾರೆ.

Must Read