Saturday, September 20, 2025

ದೆಹಲಿಯ ಶಾಲೆಗಳಿಗೆ ಮುಂದುವರಿದ ಬಾಂಬ್ ಬೆದರಿಕೆ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಮುಂದುವರೆದಿವೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಖ್ಯಾತ ಶಾಲೆಗಳಿಗೆ ದುಷ್ಕರ್ಮಿಗಳಿಂದ ಬೆದರಿಕೆ ಸಂದೇಶಗಳು ಬಂದಿರುವುದು ದೃಢಪಟ್ಟಿದೆ. ಈ ಬೆದರಿಕೆಗಳ ಬೆನ್ನಲ್ಲೇ ಮುನ್ನೆಚ್ಚರಿಕೆಯಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿದೆ. ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳಗಳ ಮೂಲಕ ತಪಾಸಣೆ ನಡೆಯುತ್ತಿದೆ.

ಡಿಪಿಎಸ್ ದ್ವಾರಕಾ, ನಜಾಫ್ ಗಡ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಹಾಗೂ ಸರ್ವೋದಯ ವಿದ್ಯಾಲಯ ಸೇರಿದಂತೆ ಅನೇಕ ಶಾಲೆಗಳ ಮೇಲೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವುದು ದಾಖಲಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಈ ಬಾಂಬ್ ಬೆದರಿಕೆ ಕರೆಗಳು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಉಂಟುಮಾಡಿವೆ.

ಕಳೆದ 8 ತಿಂಗಳಿಗಷ್ಟೇ 150ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ದಾಖಲಾಗಿವೆ. ಇದು ದೆಹಲಿ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಾಲಾ ಪರಿಸರದಲ್ಲಿ ಶಾಂತಿ ಕಾಯ್ದುಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ.

ಸೀನಿಯರ್ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ, “ನಾವು ಕ್ಯಾಂಪಸ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇವೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.”

ಇತ್ತೀಚೆಗೆ ದೆಹಲಿ ಹೈಕೋರ್ಟ್‌ಗೆ ಬಂದ ಬಾಂಬ್ ಬೆದರಿಕೆ ಕೂಡ ತಲ್ಲಣವನ್ನು ಉಂಟುಮಾಡಿತ್ತು. ಕೋರ್ಟ್ ಸಿಬ್ಬಂದಿ, ವಕೀಲರು ಮತ್ತು ಭದ್ರತಾ ದಳ ಎಲ್ಲರನ್ನೂ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿತ್ತು. ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಕೋರ್ಟ್‌ ಆವರಣದ ಎಲ್ಲಾ ಪ್ರದೇಶಗಳನ್ನು ಪರಿಶೀಲಿಸಿದರೂ ಯಾವುದೇ ಸ್ಫೋಟಕ ಪತ್ತೆಯಾಗಲಿಲ್ಲ.

ಇದನ್ನೂ ಓದಿ