ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಲಿದ್ದು, ಇದರ ಮಧ್ಯ ಕ್ರಿಶ್ಚಿಯನ್ ಜಾತಿ ಪಟ್ಟಿಯಲ್ಲಿ, ಹಿಂದು ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ.
ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರವೇಶಿಸಿದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಇದೀಗ ರಾಜ್ಯಪಾಲ ಥಾವರ್ ಚಂದ್ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.
ಜಾತಿ ಜನಗಣತಿಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಮತ್ತು ಇತರರ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು.
ಕ್ರಿಶ್ಚಿಯನ್ ಧರ್ಮಕ್ಕೆ ಹಿಂದು ಉಪಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಹಾಗೂ ದೀರ್ಘಾವಧಿಯ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಟ್ಟಿಯಲ್ಲಿನ ಜಾತಿಗಳ ದ್ವಿ ಗುರುತನ್ನು ಪಟ್ಟಿಯಿಂದ ಕೈಬಿಡುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.