Sunday, September 21, 2025

ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಗೆ ಬೆಂಕಿ: 25 ಲಕ್ಷ ಮೌಲ್ಯದ ಬಟ್ಟೆ ಸುಟ್ಟುಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿ ಬೆಂಕಿಗೆ ಆಹುತಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಎಂ.ಜಿ.ರಸ್ತೆಯಲ್ಲಿರುವ ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ ಬಿದ್ದು ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ