Friday, October 31, 2025

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ ಹೊಸ ಕಳೆ! ಕಾಮಗಾರಿಗಾಗಿ 215 ಕೋಟಿ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ ಹೊಸ ಕಳೆ ನೀಡುವ ನಿಟ್ಟಿನಲ್ಲಿ ಅದರ ಕಾಮಗಾರಿಗಾಗಿ ಸರ್ಕಾರ 215 ಕೋಟಿ ರೂ. ಅನುಮೋದನೆ ನೀಡಿದೆ.

ಉತ್ತರ ಕರ್ನಾಟಕದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿ ವರ್ಷ ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುತ್ತಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ದೇವಾಲಯದ ಅಭಿವೃದ್ಧಿಗೆ ಸಿದ್ಧಪಡಿಸಿದ `ಮಾಸ್ಟರ್ ಪ್ಲ್ಯಾನ್’ಗೆ ಅನುಮೋದಿನೆ ನೀಡಿದೆ. ಜೊತೆಗೆ ಅದರ ಕಾಮಗಾರಿಗಾಗಿ 215.25 ಕೋಟಿ ರೂ. ಅನುಮೋದನೆ ನೀಡಿದೆ.

ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ರೇಣುಕಾ ಯಲ್ಲಮ್ಮ ಪ್ರಾಧಿಕಾರ ಮತ್ತು ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ದೇವಾಲಯದ ಅಭಿವೃದ್ಧಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ವೈವಿಧ್ಯಮಯ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದು, ತಿರುಪತಿ ಮಾದರಿಯಲ್ಲಿ 14 ಕಾಮಗಾರಿಗಳು ನಡೆಯಲಿವೆ.

error: Content is protected !!