Sunday, September 21, 2025

ಜನರ ಕಷ್ಟ ನಿಮ್ಮ ಕಣ್ಣಿಗೆ ಬೀಳ್ತೀಲ್ವಾ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು; ಸಿಎಂ ಫುಲ್‌ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿದಂದು ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಂದ ಮಾಹಿತಿ ಪಡೆದ ಸಿಎಂ, ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದಾರೆಂದು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಠ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು, ನಾಚಿಕೆ ಆಗುವುದಲ್ಲವೇ ನಿಮ್ಗೆ? ಮಚ್ಚಿರುವ ಗುಂಡಿಗಳೂ ನೆಟ್ಟಗಿಲ್ಲ. ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ? ಪ್ರತಿ ವಾರ್ಡ್‌ನ ಎಂಜಿನಿಯರ್‌ಗಳು, ಏನ್‌ ಮಾಡ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ಗುಂಡಿ ಮುಚ್ಚದಿದ್ದರೇ ಎಲ್ಲ ಚೀಫ್ ಎಂಜಿನಿಯರ್‌ಗಳನ್ನ ಸಸ್ಪೆಂಡ್‌ ಮಾಡಿ ಮನೆಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ