Sunday, September 21, 2025

WEATHER | ಸೆ.24ರಿಂದ ರಾಜ್ಯಾದ್ಯಂತ ಮಳೆ ಅಬ್ಬರ ಮತ್ತಷ್ಟು ಜೋರು, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಗೋಚರಿಸುತ್ತಿದೆ. ಎಚ್​​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ