Friday, September 12, 2025

ಬೆಂ.ಗ್ರಾ. ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ: ರಾಗಾ ಬಳಿಕ ಡಿಕೆಶಿ ಹೊಸ ಬಾಂಬ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲಿಯೂ ಗೋಲ್ಮಾಲ್ ನಡೆದಿದೆ ಎಂದು ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಇಲ್ಲಿ ಅನೇಕ ಗೋಲ್ಮಾಲ್‌ಗಳು ನಡೆದಿವೆ ಎಂದು ಹೇಳಿದ್ದಾರೆ.

ಇನ್ನೂ ಇದೇ ವೇಳೆ ಮಹದಾಯಿಗೆ ಕೇಂದ್ರ ಸರ್ಕಾರ ಅನುಮತಿ ಕೊಡಲ್ಲ ಎಂಬ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ. ಈಗಾಗಲೇ ಮಹದಾಯಿ ಯೋಜನೆ ಬಗ್ಗೆ ಅವಾರ್ಡ್ ತೀರ್ಮಾನ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ