Saturday, November 1, 2025

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಇದರ ಬೆನ್ನಲ್ಲೇ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಇಂದು (ಜುಲೈ 24) ಆದೇಶ ಹೊರಡಿಸಿದೆ.

ಎ1 ಆರೋಪಿಯ ಜಾಮೀನು ಅರ್ಜಿ ವಜಾ
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂದು ಹೇಳಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

error: Content is protected !!