ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ದಸರಾ ಕ್ರೀಡಾಕೂಟ 2025ರ ಉದ್ಘಾಟನಾ ಸಮಾರಂಭ ಸೆ. 22ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೆ. 22ರಿಂದ 25ರವರೆಗೆ ನಡೆಯಲಿದೆ.
ಮೂರು ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ವಿನೇಶ್ ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯಿಯನ್ ಪಂದ್ಯಗಳಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಹೊಂದಿದ್ದಾರೆ. ಫೆೆಬ್ರವರಿ 18, 2019 ರಂದು ನಡೆದ ಲಾರೆನ್ಸ್ ವರ್ಲ್ಡ್ ಚಾಂಪಿಯನ್ ಶಿಪ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ.