January16, 2026
Friday, January 16, 2026
spot_img

ವೀವ್ ಪಾಯಿಂಟ್​​ನಲ್ಲಿ ಹೆಂಡತಿ ಜೊತೆ ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಗಂಡ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಮ್ಮಣ್ಣುಗುಂಡಿಯ ಪ್ರವಾಸಿ ತಾಣದ ವೀವ್ ಪಾಯಿಂಟ್​​ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವಂತಹ ಘಟನೆ ನಡೆದಿದೆ.

ಸಂತೋಷ್ (40) ಮೃತ ವ್ಯಕ್ತಿ. ಸಂತೋಷ್ ಶಿಕ್ಷಕರಾಗಿದ್ದರು. ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ಶಿಕ್ಷಕ ಸಂತೋಷ್ ಮತ್ತು ಹೆಂಡತಿ ಶ್ವೇತ ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ನೋಡಲು ಬಂದಿದ್ದರು. ಕೆಮ್ಮಣ್ಣುಗುಂಡಿ ಪಾರ್ಕ್ ವೀಕ್ಷಣೆ ಮಾಡಿದ ದಂಪತಿ, ಕೆಮ್ಮಣ್ಣುಗುಂಡಿ ವೀವ್ ಪಾಯಿಂಟ್​ ಬಳಿ ಹೋಗಿದ್ದಾರೆ. ಇಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಸಂತೋಷ್ ಮುಂದಾಗಿದ್ದರು. ಪ್ರಪಾತದ ತುದಿಯಲ್ಲಿ ನಿಂತಿದ್ದ ಸಂತೋಷ್ ಕಾಲು ಜಾರಿ ನೂರಾರು ಅಡಿ ಆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಕಲ್ಲು ಬಂಡೆಗಳು ಬಡಿದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮೃತ ಶಿಕ್ಷಕ ಸಂತೋಷ್​ ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರು. ಶ್ವೇತ ಜೊತೆ ಕಳೆದ‌ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ದಸರಾ ರಜೆ ಸಿಕ್ಕ ಹಿನ್ನಲೆ ಕೆಮ್ಮಣ್ಣುಗುಂಡಿಗೆ ಹೆಂಡತಿ ‌ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಭೀಕರ ದುರಂತ ಸಂಭವಿಸಿದೆ.

Must Read

error: Content is protected !!