Monday, September 22, 2025

WEATHER | ರಾಜ್ಯದಲ್ಲಿ ಇಂದು ಕೂಡ ಮಳೆ, ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇಂದು ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇದನ್ನೂ ಓದಿ