March 14, 2026
Saturday, March 14, 2026
spot_img

ನಕಲಿ ಬಿಲ್​​​ ಪಾಸ್​ ಮಾಡಲು ಒತ್ತಡ: ಇಬ್ಬರು ಅಧಿಕಾರಿಗಳ ಹೆಸರು ಬರೆದಿಟ್ಟು PWD ಇಂಜಿನಿಯರ್ ಸಾವಿಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಕೆಲಸ ಮಾಡುತ್ತಿದ್ದ 30 ವರ್ಷದ ಸಹಾಯಕ ಎಂಜಿನಿಯರ್ ಸಾವಿಗೆ ಶರಣಾಗಿದ್ದಾರೆ.

ಮೃತರನ್ನು ಜ್ಯೋತಿಷಾ ದಾಸ್​ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ (ಜುಲೈ 22) ಮಧ್ಯಾಹ್ನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಕಲಿ ಬಿಲ್‌ಗಳನ್ನು ಪಾಸ್​ ಮಾಡಲು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದರಿಂದ ಸಾವಿಗೆ ಶರಣಾಗಿರುವುದಾಗಿ ಜ್ಯೋತಿಷಾ ಬರೆದಿದ್ದಾರೆ ಎನ್ನಲಾದ ಕೈಬರಹದ ಡೆತ್​ನೋಟ್​ ಪೊಲೀಸರಿಗೆ ಆಕೆಯ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರು ಹಿರಿಯ ಅಧಿಕಾರಿಗಳ ಹೆಸರನ್ನು ಮಹಿಳೆ ಹೆಸರಿಸಿದ್ದಾರೆ.

ಅಪೂರ್ಣಗೊಂಡ ಕೆಲಸದ ಬಿಲ್‌ಗಳನ್ನು ಪಾಸ್​ ಮಾಡುವಂತೆ ಇಬ್ಬರು ಹಿರಿಯ ಅಧಿಕಾರಿಗಳು ನಿರಂತರ ಒತ್ತಡ ಹೇರಿದರು. ಇದರಿಂದಾಗಿ ನಾನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ. ನನ್ನ ಕೆಲಸದ ಒತ್ತಡದಿಂದಾಗಿ ನಾನು ಈ ಹೆಜ್ಜೆ ಇಡುತ್ತಿದ್ದೇನೆ. ಕಚೇರಿಯಲ್ಲಿ ನನಗೆ ಮಾರ್ಗದರ್ಶನ ನೀಡಲು ಯಾರೂ ಇಲ್ಲ. ನಾನು ದಣಿದಿದ್ದೇನೆ. ನನ್ನ ಹೆತ್ತವರು ನನಗಾಗಿ ಚಿಂತಿತರಾಗಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಇಂಜಿನಿಯರ್ ಆರೋಪಿಸಿದ್ದಾರೆ.

ಜ್ಯೋತಿಷಾ ಅವರ ಕುಟುಂಬವು ಪೊಲೀಸ್ ದೂರು ದಾಖಲಿಸಿದ್ದು, ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಸರ್ಮಾ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ವಿವರವಾದ ತನಿಖೆ ಮಾಡುವಂತೆ ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !