ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಆರಂಭವಾಗುತ್ತಿದ್ದು, ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ. ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿರುವ ಖಾಕಿ ಪಡೆ, ಚಾಮುಂಡಿ ಬೆಟ್ಟಕ್ಕೆ ಪ್ರವೇಶಿಸುವವರ ತಪಾಸಣೆ ನಡೆಸುತ್ತಿದೆ. ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ಗಳನ್ನೂ ಬಿಡುತ್ತಿಲ್ಲ.
ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ. ಬಾನು ಮಷ್ತಾಕ್ ದಸರಾ ಉದ್ಘಾಟನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಹಾಗೂ ಕೆಲ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆ ಯಾವುದೇ ಸಮಸ್ಯೆಯಾಗದಂತೆ ಭದ್ರತೆ ಹೆಚ್ಚಿಸಲಾಗಿದೆ.
ಇಂದಿನಿಂದ ದಸರಾ ಮಹೋತ್ಸವ ಆರಂಭ, ಸಾಂಸ್ಕೃತಿಕ ನಗರಿಯಲ್ಲಿ ಬಂದೋಬಸ್ತ್
