Monday, September 22, 2025

ದಸರಾ ಸಂಭ್ರಮ: ನೀಲಿ ಜರಿ ಸೀರೆಯಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಆಗಲಿದೆ.

ಇನ್ನು ಚಾಮುಂಡಿ ದೇವಸ್ಥಾನವನ್ನು ಕಬ್ಬಿನ ಜಲ್ಲೆ ಮತ್ತು ಹೂಗಳಿಂದ ಅಲಂಕೃತ ಮಾಡಲಾಗಿದೆ. ದೇವಸ್ಥಾನ ಒಳ ಭಾಗದಲ್ಲಿನ ಪ್ರತಿ ಕಂಬಕ್ಕೂ ಕಬ್ಬು ಕಟ್ಟಿ ಅಲಂಕಾರ ಮಾಡಲಾಗಿದೆ. ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ನಾಡಹಬ್ಬಕ್ಕೆ ಅದ್ದೂರಿ ಚಾಲನೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ. 

ವಿರೋಧದ ನಡುವೆಯೂ ಲೇಖಕಿ ಬಾನು ಮುಷ್ತಾಕ್ ಈ ಬಾರಿ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ, ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಬಾನು‌ ಮುಷ್ತಾಕ್ ಮತ್ತು ದಸರಾ ಉದ್ಘಾಟನಾ ಸಮಯದಲ್ಲಿ ಬಿಗಿ ಭದ್ರತೆ ನೀಡಲಾಗಿದೆ.  ಇಂದು ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾಕೈಂಕರ್ಯಗಳು ನೆರವೇರಿದೆ. ಬಳಿಕ ಬೆಳ್ಳಿರಥಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ವೇದಿಕೆಗೆ ತಂದು ಪುಷ್ಪಾರ್ಚನೆ ಮಾಡಲಿದ್ದಾರೆ. ಬೆಳಿಗ್ಗೆ 10:10ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಲೇಖಕಿ ಬಾನು ಮುಷ್ತಾಕ್ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟನೆ ಮಾಡಲಿದ್ದಾರೆ

ಇದನ್ನೂ ಓದಿ