ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ, ಶ್ರೀರಂಗಪಟ್ಟಣದಲ್ಲಿ ಹೈದರಾಲಿ, ಟಿಪ್ಪು ಸುಲ್ತಾನ್ ದಸರಾ ಮಾಡಿದ್ದರು. ಈ ಇತಿಹಾಸ ಎಲ್ಲರಿಗೂ ಗೊತ್ತಿರಬೇಕು. ಸ್ವಾರ್ಥಕ್ಕಾಗಿ ರಾಜಕೀಯಕ್ಕಾಗಿ ಇತಿಹಾಸ ತಿರುಚುವುದು ಅಕ್ಷ್ಮಮ್ಯ ಅಪರಾಧ ಎಂದು ವಿರೋಧಿಗಳನ್ನು ದೂರಿದರು.
ರಾಜಕೀಯ ಮಾಡುವುದಾದರೆ ಚುನಾವಣೆ ಇದೆ. ಆಗ ಮಾಡೋಣಾ, ಗೋಡಾ ಹೈ ಮೈದಾನಾ ಹೈ. ರಾಜಕೀಯ ಮಾಡುವುದಾದರೆ ಅಲ್ಲಿ ಮಾಡೋಣಾ. ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ ನಿರ್ಧಾರವನ್ನು ರಾಜ್ಯದ ಬಹುತೇಕ ಜನ ಒಪ್ಪಿದ್ದಾರೆ. ಅವರು ಹುಟ್ಟಿನಿಂದ ಮುಸ್ಲಿಂ ಆಗಿರಬಹುದು, ಆದರೆ ಅವರು ಮನುಷ್ಯರು. ಮನುಷ್ಯರು ಧರ್ಮದ ಆಧಾರದ ಮೇಲೆ ದ್ವೇಷಿಸಬಾರದು. ಧರ್ಮದ ಆಧಾರದ ಮೇಲೆ ದ್ವೇಷ ಮಾಡಿದರೆ ಅದು ಮನುಷ್ಯತ್ವದ ಲಕ್ಷಣ ಅಲ್ಲ ಎಂದು ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದವರಿಗೆ ತಿರುಗೇಟು ಕೊಟ್ಟರು.