Monday, September 22, 2025

ಮನೆ ಗೋಡೆ ಕುಸಿದು ಬಾಲಕಿ ಸಾವು: ನಾಲ್ಕು ಮಕ್ಕಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ.

ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು, 17 ವರ್ಷದ ಸಾನಿಯಾ ಸೈಫನಸಾಬ್ ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಮೆಹಬೂಬ್, ನಿಶಾದ್, ಆಯಿಷಾ, ರಮಜಾನಬಿಗೆ ಗಾಯವಾಗಿದ್ದು, ಗಾಯಗಳುಗಳನ್ನು ಯಡ್ರಾಮಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ತಂದೆ-ತಾಯಿ ಕೂಲಿ ಕೆಲಸದ ನಿಮಿತ್ಯ ಬೇರೆ ಊರಿಗೆ ಹೋದ್ದ ವೇಳೆ ಈ ದುರ್ಘಟನೆ ನಡೆದಿದೆ. 

ಗೋಡೆ ಕುಸಿತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮೂವರು ಮಕ್ಕಳ ರಕ್ಷಣೆ ಮಾಡಿದ್ದಾರೆ. ಈ ಕುರಿತು ಯಡ್ರಾಮಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಯಾವ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆ ಆಸ್ಪತ್ರೆಯ ಮುಂದೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ