ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಹಿಂದೆ ಹೈದರಾಲಿ ಹಾಗೂ ಟಿಪ್ಪು ಸುಲ್ತಾನ್ ಸಹ ದಸರಾ ಹಬ್ಬವನ್ನು ಆಚರಿಸುತ್ತಿದ್ದರು ಇತಿಹಾಸ ತಿರುಚಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ಬಳಿಕ ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಮೈಸೂರು ಅರಸರು ಆಚರಣೆ ಮಾಡಿದರು. ನಂತರ ಶ್ರೀರಂಗಪಟ್ಟಣದಲ್ಲಿ ಹೈದರಾಲಿ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಎಲ್ಲರೂ ಇತಿಹಾಸವನ್ನ ತಿಳಿದುಕೊಳ್ಳಬೇಕು. ಆ ಕಾರಣಕ್ಕಾಗಿಯೇ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಂದು ಶಾಲೆಯಲ್ಲೂ ಓದಬೇಕೆಂದು ಮಾಡಿದ್ದೇವೆ. ಇತಿಹಾಸವನ್ನ ತಿರುಚಿ ರಾಜಕೀಯಕ್ಕೋಸ್ಕರ ಮಾಡಬಾರದು. ರಾಜಕೀಯ ಮಾಡೋಣ ಅಂದ್ರೆ ಬಹಳಷ್ಟು ಇದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಇಲ್ಲ ಸಲ್ಲದ ದ್ವೇಷಕ್ಕೋಸ್ಕರ ರಾಜಕಾರಣ ಮಾಡಬಾರದು ಎಂದು ಹೇಳಿದರು.