ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿ ಮುಂದೆ ಕ್ರಿಶ್ಚಿಯನ್ ಅಂತ ಬರೆದಿರೋದು ಸರ್ಕಾರವೇ ಮತಾಂತರಕ್ಕೆ ಪ್ರೋತ್ಸಾಹ ನೀಡಿದಂತೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ಅಸಮಾಧಾನ ಹೊರಹಾಕಿದ್ದಾರೆ.
ತುಮಕೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಮುಂದೆ ಕ್ರಿಶ್ಚಿಯನ್ ಅಂತ ಬರೆಯುವುದನ್ನು ನಾನೂ ವಿರೋಧ ಮಾಡಿದ್ದೇನೆ. ಅದನ್ನು ಈಗ ಡಿಲೀಟ್ ಮಾಡಿದ್ದಾರೆ ಎಂದು ಹೇಳಿದರು.
ನಾನು ನಾಯಕ ಜಾತಿಯವನು ಕ್ರಿಶ್ಚಿಯನ್‌ಗೆ ಮತಾಂತರಗೊಂಡರೆ ನಾಯಕ ಜಾತಿಯ ಬೆನಿಫಿಟ್ ತಗೋಬಾರದು. ಸರ್ಕಾರ ಇದರ ಬಗ್ಗೆಯೂ ಗಮನ ಹರಿಸಬೇಕು ಎಂದು ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.