Monday, September 22, 2025

ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್: ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ, ಪ್ರಕರಣವನ್ನ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠಕ್ಕೆ ವರ್ಗಾಯಿಸಿತು.

ಈ ಹಿಂದೆ ಪ್ರಕರಣ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅಲ್ಲದೇ ಡಿ.ಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಆದಾಯ ತೆರಿಗೆ ಪ್ರಕರಣವೂ ಬಾಕಿ ಇರುವ ಹಿನ್ನಲೆ ಎಲ್ಲ ಪ್ರಕರಣಗಳ ವಿಚಾರಣೆಯಾಗಲಿದೆ ಎಂದು ಸಿಜೆಐ ಬಿ.ಆರ್ ಗವಾಯಿ ಹೇಳಿದರು.

ಇದನ್ನೂ ಓದಿ