Tuesday, September 23, 2025

ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮೀ: ಸಿ ರಿಪೋರ್ಟ್‌ ಸಲ್ಲಿಕೆಗೆ ಪೊಲೀಸರ ಚಿಂತನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದರ್ಶನ್ ಜೈಲಿಗೆ ಹೋದಮೇಲೆ ಪತ್ನಿ ವಿಜಯಲಕ್ಷ್ಮಿ ಮೌನಕ್ಕೆ ಶರಣಾಗಿದ್ದು ಪೊಲೀಸರ ಕರೆಗಳನ್ನು ಸ್ವೀಕರಿಸುತ್ತಿಲ್ಲ.

ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣ ಮತ್ತು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಹೇಳಿಕೆ ಅಗತ್ಯ. ಈ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರಿಂದ ನೋಟಿಸ್‌ ಜಾರಿಯಾಗಿತ್ತು. ಆದರೆ ಎರಡೂ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ವಿಜಯಲಕ್ಷ್ಮಿ ನಿರಾಸಕ್ತಿ ತೋರಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಶ್ಲೀಲ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಚೆನ್ನಮ್ಮನಕೆರೆ ಪೊಲೀಸರು ಮೂರು ನೋಟಿಸ್ ನೀಡಿದ್ದರು. ಕೊನೆಗೆ ನೀವು ಇರುವ ಕಡೆಯೇ ಬಂದು ಹೇಳಿಕೆ ದಾಖಲಿಸುತ್ತೇವೆ ಎಂದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಹೇಳಿಕೆ ದಾಖಲಿಸದೇ ಇದ್ದರೆ ಪೊಲೀಸರು ಸಿ ರಿಪೋರ್ಟ್‌ ಸಲ್ಲಿಕೆ ಮಾಡಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ