ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ರಾತ್ರಿಯಿಡೀ ಪಶ್ಚಿಮ ಬಂಗಾಳದ ಕೋಲ್ಕತ್ತಾ ಹಾಗೂ ಉಪನಗರಗಳಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದೆ. ಮಳೆಯ ಅವಾಂತರಕ್ಕೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ.
ಈ ಮಳೆಯು ನವರಾತ್ರಿಯ ದುರ್ಗಾ ಪೂಜೆ ಆಚರಣೆಗಳ ಮೇಲೆ ವ್ಯಾಪಕ ಪರಿಣಾಮ ಬೀರಿದೆ. ಹವಾಮಾನ ಇಲಾಖೆ ಪ್ರಕಾರ ಕೊಲ್ಕತ್ತಾ ನಗರದಲ್ಲಿ ಕೇವಲ ಮೂರು ಗಂಟೆಗಳಲ್ಲಿ 185 ಮಿ.ಮೀ ಮಳೆಯಾಗಿದ್ದು, ಈ ವರ್ಷದಲ್ಲೇ ಇದು ಅತಿ ಹೆಚ್ಚು ಮಳೆ ಎನ್ನಲಾಗಿದೆ. ಜಲಾವೃತ ಪ್ರದೇಶಗಳಲ್ಲಿ ವಿದ್ಯುತ್ ಆಘಾತದಿಂದ ಐದು ಜನರು ಸೇರಿ ಮಳೆಯಿಂದ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ರಸ್ತೆ ತುಂಬೆಲ್ಲ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಗಿ, ವಾಹನ ಸವಾರರು ಪರದಾಡಿದ್ದಾರೆ. ಜೊತೆಗೆ ಉಪನಗರ ರೈಲು ಮತ್ತು ಮೆಟ್ರೋ ಸೇವೆಗಳಿಗೂ ಅಡ್ಡಿಯಾಗಿದೆ. ಮಳೆ ನೀರು ನಗರದ ತಗ್ಗು ಪ್ರದೇಶಗಳಿಗೆ ನುಗ್ಗಿ ಅಪಾರ ನಷ್ಟ ಉಂಟಾಗಿದೆ. ಭಾರೀ ಮಳೆ ಹಿನ್ನೆಲೆ ನಗರದ ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಗೆ 7 ಮಂದಿ ಬಲಿ
