ಹೊಸದಿಗಂತ ಡಿಜಿಟಲ್ ಡೆಸ್ಕ್:
23 ತಿಂಗಳ ಜೈಲುವಾಸದ ಬಳಿಕ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಮ್ ಖಾನ್ ಉತ್ತರಪ್ರದೇಶದ ಸೀತಾಪುರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.10ರಂದು ಅಲಹಾಬಾದ್ ಹೈಕೋರ್ಟ್ ಅಜಮ್ ಖಾನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ನ್ಯಾಯಾಲಯ ವಿಧಿಸಿದ ದಂಡ ಪಾವತಿ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸದ ಹಿನ್ನೆಲೆ ಬಿಡುಗಡೆ ತಡವಾಗಿತ್ತು.
ಇನ್ನೂ ಅಜಮ್ ಖಾನ್ ಬಿಡುಗಡೆ ಹಿನ್ನೆಲೆ ಸೀತಾಪುರ ನಗರದಲ್ಲಿ ಸೆಕ್ಷನ್ 144ರ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಡುಗಡೆ ವೇಳೆ ಬಂದಿದ್ದ ಬೆಂಬಲಿಗರ ಗುಂಪನ್ನು ಹೆಚ್ಚು ಕಾಲ ಜೈಲಿನ ಗೇಟ್ ಬಳಿ ನಿಲ್ಲಲು ಅವಕಾಶ ನೀಡಲಿಲ್ಲ ಎಂದು ತಿಳಿದುಬಂದಿದೆ.