Tuesday, September 23, 2025

CINE | 24 ಗಂಟೆಯಲ್ಲಿ ದಾಖಲೆಯ ವೀಕ್ಷಣೆ ಕಂಡ ‘ಕಾಂತಾರ: ಚಾಪ್ಟರ್ 1’ ಟ್ರೇಲರ್, ನಿಮಗೂ ಇಷ್ಟ ಆಯ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

2025ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಕಾಂತಾರ: ಚಾಪ್ಟರ್ 1’ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿರುವ ಈ ಚಿತ್ರ ಅಕ್ಟೋಬರ್ 2ರಂದು ಬಿಡುಗಡೆ ಆಗಲಿದೆ. ಅಕ್ಟೋಬರ್ 1ರಂದು ಪ್ರೀಮಿಯರ್ ಶೋ ಇರಲಿದೆ.

ಸದ್ಯಕ್ಕೆ ಎಲ್ಲ ಕಡೆಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಧೂಳೆಬ್ಬಿಸುತ್ತಿದೆ. ಯೂಟ್ಯೂಬ್ ಹಾಗೂ ಇತರೆ ಸೋಶಿಯಲ್ ಮೀಡಿಯಾ ಸೇರಿ 24 ಗಂಟೆಗಳಲ್ಲಿ ಬರೋಬ್ಬರಿ 107 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

‘ಹೊಂಬಾಳೆ ಫಿಲ್ಮ್ಸ್’ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ಮಾಣ ಆಗಿದೆ. ನಿರ್ಮಾಣ ಸಂಸ್ಥೆಯ ಯೂಟ್ಯೂಬ್ ಚಾನೆಲ್ ಮೂಲಕ ಟ್ರೇಲರ್ ಬಿಡುಗಡೆ ಆಗಿದೆ. ಕನ್ನಡದ ಜೊತೆಗೆ ಹಿಂದಿ, ಮಲಯಾಳಂ, ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಟ್ರೇಲರ್ ಬಂದಿದೆ.

ಇದನ್ನೂ ಓದಿ