ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ. ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸೋಮವಾರ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡು ಎಂದು ಹೇಳಿದ್ದಾರೆ.