Tuesday, September 23, 2025

ಜಾತಿ ಸಮೀಕ್ಷೆಗೆ ತಡೆ ಕೋರಿ ಅರ್ಜಿ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆಯನ್ನು ಸೆ.24ಕ್ಕೆ ಹೈಕೋರ್ಟ್‌ ಮುಂದೂಡಿದೆ.

ಜಾತಿ ಸಮೀಕ್ಷೆಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ , ರಾಜ್ಯ ಒಕ್ಕಲಿಗರ ಸಂಘ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನಡೆಸಿದ್ದು, ವಾದ-ಪ್ರತಿವಾದ ಆಲಿಸಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದರು.

ಇದನ್ನೂ ಓದಿ