ಹೊಸದಿಗಂತ ವರದಿ ಯಲ್ಲಾಪುರ:
ಯಲ್ಲಾಪುರ ತಾಲೂಕಿನ ಕಾನೂರು ಜಲಪಾತ ವೀಕ್ಷಿಸಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಬಿದ್ದು ನಾಪತ್ತೆಯಾದ ಘಟನೆ ನಡೆದಿದೆ. ಧಾರವಾಡ ಶ್ರೀನಗರದ ಸುಹೇಲ್ ಸೈಯದ್ ಅಲಿ ಶೇಖ್ (21) ಕಾಣೆಯಾದ ವಿದ್ಯಾರ್ಥಿ.
ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಓದುತ್ತಿದ್ದ ಸೋಹೇಲ್ ಸೇರಿ ಒಟ್ಟು 8 ಜನರ ತಂಡ ಕಾನೂರು ಜಲಪಾತಕ್ಕೆ ತೆರಳಿದ್ದರು. ಸೋಹೇಲ್ ಶೇಖ್ ಜಲಪಾತದ ನೀರಿನಲ್ಲಿ ಕಾಲು ಜಾರಿ ಬಿದ್ದು ತೇಲಿ ಹೋಗಿದ್ದಾನೆ. ಸ್ಥಳಕ್ಕೆ ಯಲ್ಲಾಪುರ ಸಿಪಿಐ ರಮೇಶ್ ಹಾನಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆ ಹಾಗೂ ಆಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.