ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು.
94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಭೈರಪ್ಪನವರ ಕಾದಂಬರಿಗಳು ಇಂದಿಗೂ ಪ್ರಸ್ತುತ. ಓದುಗರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದ ಕಾದಂಬರಿಗಳಿವು..
ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017)
ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ.
ಜನಮಾನಸದಲ್ಲಿ ಅಚ್ಚಾಗಿ ಉಳಿದಿವೆ ಭೈರಪ್ಪನವರ ಈ ಅದ್ಭುತ ಕಾದಂಬರಿಗಳು!
