ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ನಟ ದುಲ್ಕರ್ ಸಲ್ಮಾನ್ ನಿವಾಸದ ಮೇಲೆ ಕಸ್ಟಮ್ ಅಧಿಕಾರಿಗಳು ದಾಳಿ ಮಾಡಿ 2 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ದಾಖಲೆಗಳನ್ನು ಹಾಜರುಪಡಿಸುವಂತೆ ಸಮನ್ಸ್ ನೀಡಿದ್ದಾರೆ.
ಮಂಗಳವಾರ ದುಲ್ಕರ್ ಸಲ್ಮಾನ್ ಮನೆಗೆ ಕಸ್ಟಮ್ಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಎರಡು ಕಾರುಗಳನ್ನು ಸೀಜ್ ಮಾಡಿದ್ದಾರೆ. ಅಲ್ಲದೇ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಕೇರಳದ ಕೊಚ್ಚಿಯ ತೇವರದಲ್ಲಿರುವ ನಟ ಪೃಥ್ವಿರಾಜ್ ಸುಕುಮಾರನ್ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಅಲ್ಲಿ ಯಾವುದೇ ವಿದೇಶಿ ವಾಹನ ಪತ್ತೆಯಾಗಿಲ್ಲ ಎನ್ನಲಾಗಿದೆ.