Wednesday, September 24, 2025

ಸಾಹಿತಿ ಎಸ್.ಎಲ್ ಭೈರಪ್ಪ ನಿಧನ: ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದರುಶನಕ್ಕೆ ವ್ಯವಸ್ಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭೈರಪ್ಪ ಅವರು ತಮ್ಮ 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಹಿರಿಯ ಸಾಹಿತಿಯ ಪಾರ್ಥೀವ ಶರೀರ ಸಾರ್ವಜನಿಕ ದರುಶನಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮೂರು ದಿನಗಳ ಹಿಂದೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟೋತ್ಥಾನ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿತು. ತಜ್ಞ ವೈದ್ಯರ ಪ್ರಯತ್ನದ ನಂತರವೂ ಚೇತರಿಕೆ ಕಾಣಲಿಲ್ಲ ಎಂದು ರಾಷ್ಟ್ರೋತ್ಥಾನ ಆಸ್ಪತ್ರೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭೈರಪ್ಪನವರ ಅಂತಿಮ ದರುಶನಕ್ಕೆ ಗುರುವಾರ(ಸೆ.24)ರಂದು ಬೆಳಗ್ಗೆ 8ರಿಂದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರುಶನ ಪಡೆಯಬೇಕೆಂದು ಕುಟುಂಬದವರು ವಿನಂತಿಸಿದ್ದಾರೆ.

ಮಧ್ಯಾಹ್ನದ ತರುವಾಯ ಪಾರ್ಥಿವ ಶರೀರವನ್ನು ಮೈಸೂರಿಗೆ ಗೌರವಪೂರ್ವಕವಾಗಿ ಕರೆದೊಯ್ಯುಲಾಗುವುದು. ಮೈಸೂರಿನಲ್ಲಿಯೂ ಸಾರ್ವಜನಿಕ ದರುಶನ ವ್ಯವಸ್ಥೆ ಇರುತ್ತದೆ. ಇಂದು ಯಾರು ಆಸ್ಪತ್ರೆಗೆ ಬರಬಾರದೆಂದು ಕುಟುಂಬಸ್ಥರು ವಿನಂತಿಸಿಕೊಳ್ಳಲಾಗಿದೆ.

ಆ ಬಳಿಕ ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಅಂದರೆ ಸೆಪ್ಟೆಂಬರ್ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ.

ಸೆ.26 ರಂದು ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರುಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಭೈರಪ್ಪನವರ ನಿಧನಕ್ಕೆ ರಾಜಕೀಯ ಗಣ್ಯರಾದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌ಡಿಡಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವುರ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ