Wednesday, September 24, 2025

ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದ ಭಾರತದ ಅಂಡರ್-19 ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಅಂಡರ್-19 ತಂಡವು, ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಸತತ ಎರಡನೇ ಯೂತ್ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 300 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 249 ರನ್​ಗಳಿಗೆ ಆಲೌಟ್ ಆಗುವ ಮೂಲಕ 51 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಏಕದಿನ ಸರಣಿಯನ್ನು ಭಾರತ ತನ್ನದಾಗಿಸಿಕೊಂಡಿದೆ.

ಭಾರತದ ಪರ ಬ್ಯಾಟಿಂಗ್​​ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ 70 ರನ್ ಬಾರಿಸಿದರು. ವಿಹಾನ್ ಮಲ್ಹೋತ್ರಾ ಕೂಡ 70 ರನ್​ಗಳ ಕಾಣಿಕೆ ನೀಡಿದರು. ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು 71 ರನ್ ಕಲೆಹಾಕಿದರು.

ಇದನ್ನೂ ಓದಿ