Thursday, September 25, 2025

ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್‌.ಎಲ್‌. ಭೈರಪ್ಪ ಅಂತಿಮ ದರುಶನ, ನಾಳೆ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಡಿನ ಹಿರಿಯ ಧೀಮಂತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ತಮ್ಮ 94ನೇ ವಯಸ್ಸಿನಲ್ಲಿ ನಿನ್ನೆ ಅಪರಾಹ್ನ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಾಳೆ ಬೆಳಗ್ಗೆ (ಸೆ,26)ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇಂದು ಲಂಡನ್ ನಿಂದ ಅವರ ಪುತ್ರ ರವಿಶಂಕರ್ ಆಗಮಿಸಿದ ನಂತರ ನಾಳೆ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ. ಇಂದು ಬೆಳಗ್ಗೆ 8 ಗಂಟೆಯ ನಂತರ ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭೈರಪ್ಪ ಅವರ ಅಭಿಮಾನಿಗಳು ಮತ್ತು ಸಾಹಿತ್ಯ ಪ್ರೇಮಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಅವರ ಕುಟುಂಬಸ್ಥರು, ಅವರ ಅನುಯಾಯಿಗಳು ಮನವಿ ಮಾಡಿದ್ದಾರೆ. ಅಲ್ಲದೆ, ಇಂದು ಯಾರೂ ಆಸ್ಪತ್ರೆಗೆ ಬರಬಾರದು ಎಂದೂ ಕುಟುಂಬ ವಿನಂತಿಸಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನ ಮುಗಿದ ಬಳಿಕ ಮಧ್ಯಾಹ್ನದ ತರುವಾಯ ಪಾರ್ಥಿವ ಶರೀರವನ್ನು ಗೌರವಪೂರ್ವಕವಾಗಿ ಮೈಸೂರಿಗೆ ಕೊಂಡೊಯ್ಯಲಾಗುವುದು. ಮೂಲತಃ ಮೈಸೂರಿನವರಾದ ಭೈರಪ್ಪನವರ ಅಂತಿಮ ದರ್ಶನಕ್ಕೆ ಅಲ್ಲಿಯೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ,

ನಾಳೆ ಅಂತ್ಯಕ್ರಿಯೆ

ಸೆ.26ರಂದು ಶುಕ್ರವಾರ ಬೆಳಗ್ಗೆ ಕುವೆಂಪುನಗರದಲ್ಲಿರುವ ಭೈರಪ್ಪ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗುತ್ತದೆ. ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಇದನ್ನೂ ಓದಿ