ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಹಬ್ಬದ ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಲಭ್ಯವಾಗಲಿದೆ.
ರೈಲು ಸಂಖ್ಯೆ 06257 ಯಶವಂತಪುರ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ.30ರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06258 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅ.1 ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.