ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರವು ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಿನ್ನೆ ರಾಜ್ಯಾದ್ಯಂತ ಒಂದು ಗಂಟೆ ರಸ್ತೆ ತಡೆ ಮಾಡಿದೆ. ಗುಂಡಿಗಳನ್ನೂ ಮುಚ್ಚಿ ರಾಜ್ಯ ಸರ್ಕಾರಕ್ಕೆ ಈ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಪುಗ್ಸಟ್ಟೆ ಭಾಷಣ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬೇಕು. ಶೀಘ್ರವೇ ಗುಂಡಿಗಳನ್ನು ಮುಚ್ಚಿ ಬೆಂಗಳೂರಿನ ಗೌರವ ಉಳಿಸಬೇಕು ಎಂದು ಆಗ್ರಹಿಸಿದ್ದಾರೆ.