ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಈಗ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ಬಿಡುಗಡೆ ಆಗಿದೆ. ನೆಟ್ಫ್ಲಿಕ್ಸ್ ಮೂಲಕ ಬಿಡುಗಡೆ ಆಗಿರುವ ಈ ವೆಬ್ ಸರಣಿಗೆ ಶಾರುಖ್ ಖಾನ್ ಅವರು ಬಂಡವಾಳ ಹೂಡಿದ್ದಾರೆ.
ವೀಕ್ಷಕರಿಂದ ಈ ವೆಬ್ ಸಿರೀಸ್ ಮೆಚ್ಚುಗೆ ಪಡೆದಿದೆ. ಆದರೆ ವಿವಾದ ಕೂಡ ಶುರುವಾಗಿದೆ. ಆರ್ಯನ್ ಖಾನ್ ವಿರುದ್ಧ ಮಾಜಿ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ನೀಡುವಂತೆ ಕೇಸ್ ಹಾಕಿದ್ದಾರೆ.
ಬಾಂಬೆ ಹೈಕೋರ್ಟ್ ಮತ್ತು ಎನ್ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಆರ್ಯನ್ ಖಾನ್ ಡ್ರಗ್ಸ್ ಕೇಸ್ ವಿಚಾರಣೆ ಇನ್ನೂ ಬಾಕಿ ಇದೆ. ಹೀಗಿರುವಾಗಲೇ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯು ಮಾದಕವಸ್ತು ನಿಗ್ರಹ ದಳ ಸಂಸ್ಥೆಯನ್ನು ನಕಾರಾತ್ಮಕ ತೋರಿಸಿದೆ. ಇದರಿಂದಾಗಿ ತಮ್ಮ ವೃತ್ತಿಪರ ಖ್ಯಾತಿಗೆ ಹಾನಿಯಾಗುತ್ತದೆ. ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದಲೇ ಈ ವೆಬ್ ಸರಣಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ಸಮೀರ್ ವಾಂಖೆಡೆ ಅವರು ಕೇಸ್ ಹಾಕಿದ್ದಾರೆ.