Friday, September 26, 2025

ಫರ್ನಿಚರ್ ಶಾಪ್ ನಲ್ಲಿ ಅಗ್ನಿ ಅವಘಡ: 5 ಕೋಟಿ ಮೌಲ್ಯದ ವಸ್ತುಗಳು ಸರ್ವನಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿ ನಡೆದಿದೆ.

ರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ