Friday, September 26, 2025

ರಾಂಗ್ ವೇನಲ್ಲಿ ಬಂದ ಬಸ್ ಟ್ರಕ್​​ಗೆ ಡಿಕ್ಕಿ: 6 ಮಂದಿ ದಾರುಣ ಸಾವು, 10 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ.

ಸಾವನ್ನಪ್ಪಿದ ಆರು ಜನರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಕೆ ಬಲಂಗ್ ಪೊಲೀಸ್ ಠಾಣೆ ಬಳಿಯ ರಾಷ್ಟ್ರೀಯ ಹೆದ್ದಾರಿ -520 ರಲ್ಲಿ ಬೆಳಗ್ಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಬಸ್ ರೂರ್ಕೆಲಾದಿಂದ ಕೊಯ್ಡಾಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಯ ಒಂದು ಬದಿಯನ್ನು ದುರಸ್ತಿಗಾಗಿ ಮುಚ್ಚಿದ್ದರಿಂದ ಬಸ್ ತಪ್ಪು ಪಥದಲ್ಲಿ ಪ್ರಯಾಣಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಡಿಐಜಿ ಹೇಳಿದ್ದಾರೆ.

ಇದನ್ನೂ ಓದಿ