April 7, 2026
Tuesday, April 7, 2026
spot_img

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಗಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಅಂದರೆ ಸೆ.26 ಮತ್ತು 27 ರಂದು  ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಬರುವ ತೀವ್ರ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ 14 ಜಿಲ್ಲೆಗಳು ಗಂಭೀರ ಮಳೆ ಅಪಾಯ ವಲಯದಲ್ಲಿ ಸೇರಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರದಲ್ಲಿ ಭಾರೀ ಮಳೆಯಾಗಲಿದೆ.

ಇವುಗಳ ಹೊರತಾಗಿ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !